Breaking News
Home / ರಾಜ್ಯ / 14 ದಿನಗಳವರೆಗೆ ಇಡೀ ರಾಜ್ಯದಲ್ಲಿ ಕಠಿಣ ನಿಯಮ

14 ದಿನಗಳವರೆಗೆ ಇಡೀ ರಾಜ್ಯದಲ್ಲಿ ಕಠಿಣ ನಿಯಮ

Spread the love

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಮಿತಿ ಮೀರಿರುವ ಹಿನ್ನಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿರುತ್ತದೆ. 10 ಗಂಟೆ ಬಳಿಕ ವ್ಯಾಪಾರಿಗಳು ತಮ್ಮ ಅಂಗಡಿ – ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಬೇಕೆಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಯ, ಉತ್ಪಾದನಾ ವಲಯ ಸೇರಿದಂತೆ ಕೆಲವೊಂದು ವಲಯಗಳ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷದೊಳಗಿನವರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು.

ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಸಮಸ್ಯೆ ನಿವಾರಣೆಯಾಗಿದೆ

ರೆಮ್‌ ಡಿಸಿವರ್‌ ಲಸಿಕೆಯೂ ಸಾಕಷ್ಟು ಪ್ರಮಾಣದಲ್ಲಿ ಸರಬರಾಜಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಾರಿಗೆ ಸಂಚಾರವೂ 14 ದಿನಗಳ ಕಾಲ ಇರುವುದಿಲ್ಲ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದೆ. ಮಹಾರಾಷ್ಟ್ರವನ್ನೂ ಮೀರಿ ಸೋಂಕು ಹೆಚ್ಚಳವಾಗುತ್ತಿದೆ. ಹಾಗಾಗಿ ಸೋಂಕು ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನಗಳವರೆಗೆ ಇಡೀ ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ಬರಲಿದೆ. ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, 10 ಗಂಟೆ ಬಳಿಕ ಸಂಪೂರ್ಣ ಬಂದ್ ಆಗಲಿದೆ ಎಂದರು


Spread the love

About Ad9 Haberleri

Check Also

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ

Spread the love  *ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ* *ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ …