Breaking News
Home / ರಾಜ್ಯ / ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.
ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

 


Spread the love

About Ad9 Haberleri

Check Also

ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ 

Spread the love ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ …