Breaking News

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.
ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

 


Spread the love

About Ad9 News

Check Also

ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

Spread the love ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …