ಬೆಂಗಳೂರು: ಜೂನ್ 30 ರವರೆಗೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕೆಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ.
ಕೇಂದ್ರ ಗೃಹ ಇಲಾಖೆ ಪತ್ರ ಬರೆದ ಹಿನ್ನೆಲೆಯಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು. ಈಗಾಗಲೇ ಲಾಕ್ಡೌನ್ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಜೂನ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಸ್ತುವಾರಿ ಸಚಿವರು, ಅಧಿಕಾರಿಗಳ ಸಭೆ ನಡೆಸಲಿದ್ದು, ಸಭೆಯಲ್ಲಿ ಲಾಕ್ಡೌನ್ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.
ರಾಜ್ಯದಲ್ಲಿ ಲಾಕ್ ಡೌನ್ ನಂತರದಲ್ಲಿ ಸೋಂಕು ಇಳಿಮುಖವಾಗುತ್ತಿದೆ. ದೆಹಲಿ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಸುದೀರ್ಘ ಲಾಕ್ ಡೌನ್ ನಿಂದ ಸೋಂಕು ಇಳಿಮುಖವಾಗಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಕೂಡ ಕೊರೋನಾಗೆ ಕಡಿವಾಣ ಹಾಕಲು ಇನ್ನಷ್ಟು ದಿನ ಬಿಗಿಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.