

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರನ್ನು ಮೂವರನ್ನು ಕಾಂಗ್ರೇಸ್ ಪಕ್ಷದ ಶಿಸ್ತು ಸಮಿತಿಯ ಅಧ್ಯಕ್ಷ ಕೆ ರೆಹಮಾನ್‍ಖಾನ್ ರವರು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದಾರೆ ಎಂದು ಕೌಜಲಗಿ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಅರಳಿ ತಿಳಿಸಿದ್ದಾರೆ.
ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಅವರು ಸ್ಪರ್ಧಿಸಿದ್ದು, ಭೀಮಪ್ಪ ಗಡಾದ ಅವರು ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದು ಇದು ಸಂಪೂರ್ಣವಾಗಿ ಪಕ್ಷ ವಿರೋಧಿ ಚಟುವಟಿಕೆಯಾಗಿದೆ, ಅರಭಾವಿ ಕಾಂಗ್ರೆಸ್‍ನ ಭೀಮಪ್ಪ ಹಂದಿಗುಂದ್ ಹಾಗೂ ರಮೇಶ್ ಉಟಗಿ ಅವರು ಕೂಡ ಬಂಡಾಯ ಅಭ್ಯರ್ಥಿಯೊಂದಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವುದರಿಂದ ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಕೂಡ ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ
Ad9 News Latest News In Kannada