ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ ವಲಯವು ಉತ್ತಮ ಫಲಿತಾಂಶವನ್ನು ಹೊಂದುವ ಮೂಲಕ ಸಾಧನೆ ಮಾಡಿದ್ದಾರೆ. ಚಿಕ್ಕೋಡಿ ಜಿಲ್ಲೆಗೆ ವಲಯಕ್ಕೆ ಪ್ರಥಮ ಸ್ಥಾನವನ್ನು ಪೂಜಾ ಗಂಗನ್ನವರ 622 (99.52%), ದ್ವಿತೀಯ ಸ್ಥಾನದಲ್ಲಿ ಚೇತನ ಕುಳ್ಳೂರ 620 (99.2%), ವಿಶ್ವನಾಥ ಜಗ್ಗಿನವರ 620 (99.2%), ಲಕ್ಷ್ಮೀ ಕಂಬಳಿ 620 (99.2%), ತೃತೀಯ ಲಕ್ಷ್ಮೀ ಕುದರಿ 619 (99.04%), ಮೇಘಾ ಮುರಗೋಡ, ನಿರ್ಮಲಾ ಕಂಕಣವಡಿ 619 (99.04%), ರೂಪಾ ಹುಲಕುಂದ 619 (99.04%), ಪ್ರವೀಣ ಬಾಯಪ್ಪಗೋಳ 619 (99.04%) ಪಡೆದುಕೊಂಡಿದ್ದಾರೆ.
ಶೈಕ್ಷಣಿಕ ವಲಯದಲ್ಲಿ ಎ+ ಶ್ರೇಣಿಯಲ್ಲಿ 1530, ಎ ಶ್ರೇಣಿಯಲ್ಲಿ 2278, ಬಿ+ ಶ್ರೇಣಿಯಲ್ಲಿ 1662, ಬಿ ಶ್ರೇಣಿಯಲ್ಲಿ 968, ಸಿ+ ಶ್ರೇಣಿಯಲ್ಲಿ 437, ಸಿ ಶ್ರೇಣಿಯಲ್ಲಿ 42 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೈಕ್ಷಣಿಕ ವಲಯದ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಗುಣಮಟ್ಟದ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ.
Check Also
ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. …