ಮೂಡಲಗಿ ಸೆ.19 : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ದಿನಾಂಕ 20ನೇ ಸೆಪ್ಟೆಂಬರ 2023 ರಂದು ಮೂಡಲಗಿ ತಾಲೂಕಿನ ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದೆ. ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ದಿ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ.
ಸ್ಪರ್ಧೆಗಳ ವಿವರ
ಅಥ್ಲೆಟಿಕ್ಸ್ (ಪುಷರಿಗಾಗಿ) : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ, 10,000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ , 110ಮೀ ಹರ್ಡಲ್ಸ್, 4*100 ರಿಲೇ, 4*400 ರಿಲೇ.
ಅಥ್ಲೆಟಿಕ್ಸ್ (ಮಹಿಳೆಯರಿಗಾಗಿ) : 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ , 100ಮೀ ಹರ್ಡಲ್ಸ್, 4*100 ರಿಲೇ, 4*400 ರಿಲೇ.
ಗುಂಪು ಆಟಗಳು : ವಾಲಿಬಾಲ್, ಪುಟ ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗ (ಪುರುಷ ಮತ್ತು ಮಹಿಳೆಯರಿಗಾಗಿ).
ನಿಯಮಗಳು:- 1. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಮೂಡಲಗಿ ತಾಲೂಕಿನ ರಹವಾಸಿಯಾಗಿರಬೇಕು. 2.ಕ್ರೀಡಾಪಟುಗಳು ದಿ.20ರಂದು ಬೆಳಿಗ್ಗೆ 9.00 ಗಂಟೆಗೆ ಮೂಡಲಗಿ ಪಟ್ಟಣದ ಎಂ.ಇ.ಎಸ್. ಕಾಲೇಜ್ ಮೈದಾನದಲ್ಲಿ ಹಾಜರಿದ್ದು ಸಂಘಟಕರಿಗೆ ವರದಿ ಮಾಡಿಕೊಳ್ಳುವುದು. 3. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಾಗಿರುವುದಿಲ್ಲ. 4. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. 5. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. 6. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿದ್ದಲ್ಲಿ ಅಂತವರ ಆಯ್ಕೆಯನ್ನು ರದ್ದುಗೊಳಿಸಲಾಗುವುದು. ಗುಂಪು ಸ್ಪರ್ಧೆಗಳಲ್ಲಿ ಸಂಪೂರ್ಣ ತಂಡವನ್ನು ರದ್ದುಗೊಳಿಸಲಾಗುವುದು. 7 ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು. 8. ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ನೀಡಲಾಗುವುದಿಲ್ಲ. 9.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8618169003 ಅಥವಾ 8618851121 ಸಂಪರ್ಕಿಸಬಹುದಾಗಿದೆ ಎಂದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರಾದ ಬಿ.ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
