ಮೂಡಲಗಿ : ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವೀತಿಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಕುಮಾರಿ ವಿದ್ಯಾ ಯಾದವಾಡ ಇವಳು ಇತ್ತೀಚಿಗೆ ವಿಜಯಪೂರ ಜಿಲ್ಲೆಯಲ್ಲಿ ಜರುಗಿದ 2023-24ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಿ 15 ಕಿ. ಮೀ ರೋಡ್ ರೇಸ್‍ನಲ್ಲಿ ದ್ವೀತಿಯ ಸ್ಥಾನ ಹಾಗೂ 6 ಕಿ.ಮೀ ಟೈಮ್ ಟ್ರಾಯಲ್ಸ್‍ನಲ್ಲಿ ತೃತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು.
ಮುಂದಿನ ತಿಂಗಳು ಜಾರ್ಖಂಡ್‍ನಲ್ಲಿ ಜರುಗುವ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ದೇಯಲ್ಲಿ ಭಾಗವಹಿಸಲಿದ್ದು. ವಿದ್ಯಾರ್ಥಿಯನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಪಾಂಡುರಂಗ ಭಂಡಾರಿ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಹಾಗೂ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.