Breaking News

ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

 

ಮಂಗಳವಾರದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ ಗ್ರಾಮಗಳಲ್ಲಿನ ಸ್ಥಿತಿಗತಿಗಳನ್ನು ಅರಿತು ಸಂಬAಧಿಸಿದ ಅಧಿಕಾರಿಗಳಿಗೆ ವರದಿ ಮಾಡುವಂತೆ ಹೇಳಿದರು

ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಸ್ಥಳಿಯ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು, ಈ ಬಾರಿ ಮಳೆರಾಯನು ಕೈ ಕೊಟ್ಟಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಅವುಗಳನ್ನು ಪರಿಹರಿಸಲು ತಕ್ಷಣವೇ ಮೇಲಾಧಿಕಾರಿಗಳಿಗೆ ವರದಿಯನ್ನು ಒಪ್ಪಿಸುವಂತೆ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಗೆ ಮೊದಲು ಆದ್ಯತೆ ನೀಡಬೇಕು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ತಲೆದೋರದಂತೆ ಕರ್ತವ್ಯ ನಿರ್ವಹಿಸಬೇಕು, ಎಲ್ಲಿ ಗಂಭೀರ ಸ್ವರೂಪದ ನೀರಿನ ಸಮಸ್ಯೆಗಳು ಇದೆಯೋ ಅಲ್ಲಿ ಟ್ಯಾಂಕರ ಮೂಲಕ ನೀರನ್ನು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೋಳಬೇಕು, ಸ್ಥಳೀಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳನ್ನು ಈಡೇರಿಸುವ ಕೆಲಸ ಮಾಡುವಂತೆ ಅವರು ಸೂಚನೆ ನೀಡಿದರು.
ಅರಭಾವಿ ಮತ ಕ್ಷೇತ್ರದಲ್ಲಿ ಒಳಪಟ್ಟಿರುವ ಕೆಲವು ಗ್ರಾಮಗಳಲ್ಲಿ ಪ್ರಸಕ್ತ ಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಫೆಬ್ರುವಾರಿ ೨೦ರೊಳಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟರೋಳಗೆ ಮತ್ತೊಂದು ಬಾರಿ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರನ್ನು ಹರಿಸಿದರೆ ಜನ ಹಾಗೂ ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೂರಾರು ಕೋಟಿ ರೂಪಾಯಿ ಮೊತ್ತದ ಜೆಜೆಎಮ್ ಕಾಮಗಾರಿ ಬಗ್ಗೆ ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಸಾರ್ವಜನಿಕರಿಗೆ ಕುಡಿಯುವ ನೀರು ಕಲ್ಪಿಸಿ ಕೊಡುವ ಮಹತ್ವಕಾಂಕ್ಷೆ ಯೋಜನೆಯಾಗಿರುವ ಜೆಜೆಎಮ್ ಬಗ್ಗೆ ಹಲವು ಕಡೆಗಳಲ್ಲಿ ಅಪಸ್ವರಗಳು ಬರುತ್ತಿವೆ. ಸರಕಾರದ ಈ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಶಾಸಕರು ತಿಳಿಸಿದರು.
ಕೌಜಲಗಿ-ಮನ್ನಿಕೇರಿ, ಕೌಜಲಗಿ-ಕುಲಗೋಡ, ಬೇಟಗೇರಿ-ಬಗರನಾಳ, ತುಕ್ಕಾನಟ್ಟಿ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಇದೇ ಮಾರ್ಚ ತಿಂಗಳ ಒಳಗಾಗಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳ್ಳಿಸುವಂತೆ ಶಾಸಕ ಬಾಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮೂಡಲಗಿ ತಹಶೀಲ್ದಾರ ಮಹಾದೇವ ಸನಮುರಿ, ಗೋಕಾಕ ತಹಶೀಲ್ದಾರ ಡಾ.ಮೋಹನ ಭಸ್ಮೆ, ಮೂಡಲಗಿ ತಾ.ಪಂ ಇಒ ಎಫ್.ಜಿ.ಜಿನನ್ನವರ, ಗೋಕಾಕ ತಾ.ಪಂ ಇಒ ಉದಯಕುಮಾರ ಕಾಂಬಳ್ಳೆ, ಮೂಡಲಗಿ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಸೇರಿದಂತೆ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …

Leave a Reply

Your email address will not be published. Required fields are marked *