ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.
ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ ಸೇರಿದಂತೆ ಹಲವು ಅಧಿಕಾರಿಗಳು ಧರ್ಮಟ್ಟಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಮುಂಜಾಗೃತ ಕ್ರಮವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Check Also
ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. …