Breaking News

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

Spread the love


ಮೂಡಲಗಿ  : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು
ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿಯವರ ಜೊತೆಗೂಡಿ, ಚಾಲನೆ ನೀಡಿ ಮಾತನಾಡಿದ ಅವರು, ಅರಭಾವಿ ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನಲ್ಲಿ, ಅರಭಾವಿಯ ಕ್ಷೇತ್ರದಲ್ಲಿ ವಿವಿಧ ರೀತಿಯ ಸೇವೆಯನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.ಅಭಿಯಾನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಕೋವಿಡ್ ಲಸಿಕಾ ಅಭಿಯಾನ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ಪುರಸಭೆ ಅದ್ಯಕ್ಷ ಹನಮಂತ ಗುಡ್ಲಮನಿ,ಪುರಸಭೆ ಸದಸ್ಯರು, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೊಳ, ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣ , ಆರೋಗ್ಯ ಕೇಂದ್ರದ ಸಿಬ್ಬಂದಿ ಸೇರಿದಂತೆ ಬಿಜೆಪಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

 


Spread the love

About Ad9 News

Check Also

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

Spread the love ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ …

Leave a Reply

Your email address will not be published. Required fields are marked *