ಮೂಡಲಗಿ: ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2022 ಕಾರ್ಯಕ್ರಮವು ಸ. 26 ಸೋಮವಾರದಂದು ಬೆಳಗ್ಗೆ 10 ರಿಂದ 5ರವರೆಗೆ ಆಯೋಜಿಸಲಾಗಿದೆ. 1 ರಿಂದ 4ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, 5 ರಿಂದ 7ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಮೇಘಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, 8 ರಿಂದ 10 ನೇ ತರಗತಿ ಕಲೋತ್ಸವ ಸ್ಪರ್ಧೆಗಳು ಮೂಡಲಗಿಯ ಶ್ರೀ ಎಲ್ ವೈ ಅಡಿಹುಡಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿಭಾಗವಾರು ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಜರುಗಲಿದ್ದು, ತಾಲೂಕಾ ಹಂತದ ವಿವಿಧ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸರಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ, ಚಿತ್ರಕಲಾ, ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
