ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್‍ನ ಭಾರತ ಜೋಡೋ ಯಾತ್ರೆಯ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ ಹೇಳಿದರು.
ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ ಮುಖಂಡರು ಹಾಗೂ ಹಳ್ಳಿ-ಹಳ್ಳಿಗಳಿಂದ ಕಾರ್ಯಕರ್ತರು ಭಾಗವಹಿಸುವ ಮೂಲಕ ಕಾಂಗ್ರೇಸ್ ಪಕ್ಷದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆಯುವ ಯಾತ್ರೆಯು ಯಶ್ವಸಿಯಾಗಲಿದೆ ಎಂದರು.
ಬಿಜೆಪಿ ಸರ್ಕಾರ ಇಡೀ ದೇಶದಲ್ಲಿ ಮೊದಲಿನಿಂದಲೂ ಧರ್ಮಗಳ ಮಧ್ಯೆ ಕಲಹ ಉಂಟು ಮಾಡಿ ತಮ್ಮ ರಾಜಕೀಯ ಬೆಳೆ ಬೇಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೌಜುಲಗಿಯ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಅರಳಿ, ವೆಂಕಟ್ಟಗೌಡ ಪಾಟೀಲ, ಪರುಶುರಾಮ ದಳವಾಯಿ, ಇರ್ಷಾದ ಪೈಲ್ವಾನ್ ಇದ್ದರು.
