Breaking News

ಸೈಕ್ಲಿಂಗ್ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿದ ಯುವನಾಯಕ ಸರ್ವೋತ್ತಮ ಜಾರಕಿಹೊಳಿ

Spread the love

ಮೂಡಲಗಿ : ಅತೀಯಾದ ಮೊಬೈಲ್ ಬಳಕೆಯಿಂದ ಕ್ರೀಡಾ ಚಟುವಟಿಕೆಗಳನ್ನು ಮರೆಯುತ್ತಿರುವ ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಗಮನದಲ್ಲಿಟ್ಟುಕೊಂಡು ಸೈಕ್ಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕೆಎಂಎಫ್ ಬೆಳಗಾವಿಯ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಶ್ರೀನಿವಾಸ್ ಹೇಳಿದರು.

ಶುಕ್ರವಾರದಂದು ಪಟ್ಟಣದ ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ, ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಸೈಕ್ಲಿಂಗ್ ಸಂಸ್ಥೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಸೈಕ್ಲಿಂಗ್ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮೀಣ ಮಟ್ಟದ ಸೈಕ್ಲಿಂಗ್ ವಿಭಾಗದಲ್ಲಿ ಅನೇಕ ಮಕ್ಕಳು ಎಲೆ ಮರೆಯ ಕಾಯಿಯಾಗಿ ಉಳಿದಿದ್ದಾರೆ, ಸರ್ಕಾರ ಕೂಡ ಇದರ ಬಗ್ಗೆ ಗಮನ ಹರಿಸಿ ಇತರ ಕ್ರೀಡೆಗಳಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಸ್ಪರ್ಧೆಗಳನ್ನು ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರೇಮವನ್ನು ಹೊರಹೊಮ್ಮಿಸುವ ಕಾರ್ಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ನಾವು ಸೈಕ್ಲಿಂಗ್ ನಂತಹ ಸ್ಪರ್ಧೆಗಳನ್ನು ಕೇವಲ ರಾಜ್ಯ ಹಾಗೂ ದೇಶ ಮಟ್ಟದಲ್ಲಿ ಮಾತ್ರ ಕಾಣುತ್ತಿದ್ದೆವು, ಆದರೆ ಶಾಸಕ ಹಾಗೂ ಕೆಎಂಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಬೆಳಗಾವಿ ಕೆಎಂಎಫ್ ಅಧ್ಯಕ್ಷರಾದ ವಿವೇಕ್ ರಾವ್ ಪಾಟೀಲರ ಮಹದಾಸೆಯಂತೆ, ಕೆಎಂಎಫ್ ಸಹಕಾರದೊಂದಿಗೆ ಗ್ರಾಮೀಣ ಮಟ್ಟದಲ್ಲಿ ಕೂಡ ಸೈಕ್ಲಿಂಗ್ ಸ್ಪರ್ಧೆ ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಸೈಕ್ಲಿಂಗ್‍ಕ್ರೀಡಾ ಪ್ರೇಮವನ್ನು ಜಾಗೃತಗೊಳಿಸಲು ಸಹಕಾರಿಯಾದಂತಾಗಿದೆ ಎಂದು ಶ್ಲಾಘಿಸಿದರು. ಕೆಎಂಎಫ್ ನಾಡಿನ ಜನತೆಗೆ ಶಕ್ತಿಯುತ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ನೀಡುತ್ತಾ ಜನರ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡುತ್ತಾ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಂಫ್ ನಿರ್ದೇಶಕರಾದ ಮಲ್ಲಪ್ಪ ಪಾಟೀಲ್ ವಹಿಸಿದ್ದರು.

ಸೈಕ್ಲಿಂಗ್ ಸ್ಪರ್ಧೆಯಲ್ಲಿ 50ಬಾಲಕರು, 25ಬಾಲಕಿಯರು ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ ಹನುಮಂತ್ ಬಿ.ಕೆ ಪ್ರಥಮ ಸ್ಥಾನ, ಬಸವರಾಜ್ ದಳವಾಯಿ ದ್ವಿತೀಯ, ರಮೇಶ್ ಬೈಲಿ ತೃತೀಯ ಸ್ಥಾನ ಪಡೆದುಕೊಂಡರೆ ಬಾಲಕಿಯ ವಿಭಾಗದಲ್ಲಿ ಕೀರ್ತಿ ಶಿರೋಳ ಪ್ರಥಮ ಸ್ಥಾನ, ಲಕ್ಷ್ಮೀ ಜಾದವ್ ದ್ವಿತೀಯ ಸ್ಥಾನ, ದಿವ್ಯಾ ದುರದುಂಡಿ ತೃತೀಯ ಸ್ಥಾನ ಪಡೆದು ಪ್ರಶಸ್ತಿ ಮುಡಿಗೇರಿಸಿಕೊಂಡರು.ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾದ ಹನುಮಂತ ನಾವಿ ವಿದ್ಯಾರ್ಥಿಗೆ ಅತಿಥಿಗಳು ಸತ್ಕರಿಸಿ ಗೌರವಿಸಿದರು.

ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಪುರಸಭೆ ಸದಸ್ಯರು, ಕೆಎಂಫ್ ಉಪಾಧ್ಯಕ್ಷರಾದ ಆರ್.ಬಿ.ಜಂಬಗಿ, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ಪ್ರ.ಕಾರ್ಯದರ್ಶಿ ಆರ್.ಎಚ್.ಪೂಜಾರಿ, ಶಾಸಕರ ಆಪ್ತ ಕಾರ್ಯದರ್ಶಿ ಅಬ್ಧುಲ್ ಮಿರ್ಜಾನಾಯಕ್, ಜುನೇದ ಪಟೇಲ್ ಸೇರಿದಂತೆ ಶಾಲಾ ಮುಖೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಡ್ವಿನ್ ಪರಸಣ್ಣವರ ಕಾರ್ಯಕ್ರಮ ಸ್ವಾಗತಿಸಿ ವಂದಿಸಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಆರ್ ಬಿ ಜಂಜಗಿ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಪ್ಪ ಪಾಟೀಲ, ಪುರಸಭೆ ಸದಸ್ಯರಾದ ರವೀಂದ್ರ ಸಣ್ಣಕ್ಕಿ, ಸಿದ್ದಪ್ಪ ಮಗದುಮ್ಮ, ಪಾಡುರಂಗ ಮಹೇಂದ್ರಕರ, ಶಿವು ಚಂಡಕಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಮೂಡಲಗಿ ಹಾಲು ಒಕ್ಕೂಟ ಉಪಕೇಂದ್ರದ ಅಧಿಕಾರಿ ರವಿ ತಳವಾರ, ಪಶು ವೈದ್ಯಾಧಿಕಾರಿ ಡಾ. ಪ್ರಕಾಶ ಬೆಳಗಲಿ, ಹಾಲು ವಿಸ್ತರಣಾಧಿಕಾರಿ ವಿಠ್ಠಲ ಲೋಕುರೆ, ಸಚೀನ ಪಡದಲ್ಲಿ, ಮಾರುಕಟ್ಟೆ ಅಧಿಕಾರಿ ಉಮೇಶ ನಾಯ್ಕ್ ಮುಂಖಡರಾದ ರಮೇಶ ಸಣ್ಣಕ್ಕಿ, ಮರೇಪ್ಪ ಮರೇಪ್ಪಗೋಳ, ಬಸು ಝಂಡೆಕುರಬರ, ಪ್ರಕಾಶ ಮುಗಳಖೋಡ, ಸಿದ್ದು ಗಡ್ಡೆಕಾರ, ಹುಸೇನಸಾಬ ಶೇಖ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …

Leave a Reply

Your email address will not be published. Required fields are marked *