Breaking News
Home / ಮೂಡಲಗಿ / ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Spread the love

 

ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು.
ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಪ್ರತಿನಿತ್ಯ ಮಹಿಳೆಯರಿಗೆ ಗೌರವವನ್ನು ಕೊಡಬೇಕೆಂದು ಹೇಳಿದರು.
ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಮಾತನಾಡಿ ಪುರುಷ ಪ್ರಧಾನವಾದ ನಮ್ಮ ದೇಶದಲ್ಲಿ ಮಹಿಳೆಯರಿಗೆ ಪೂಜ್ಯನೆಯ ಸ್ಥಾನ ನೀಡಲಾಗಿದೆ ಅದನ್ನು ಗೌರವದಿಂದ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಸ್ಥಾಪಕ ಲಕ್ಷ್ಮಣ ಅಡಿಹುಡಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಉನ್ನತ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷÀ ಸಿದ್ದಣ್ಣ ದುರದುಂಡಿ ಮಾತನಾಡಿ ಎಲ್ಲಿ ಸ್ತ್ರೀಗಳಿಗೆ ಸ್ವಾತಂತ್ರ್ಯವಿಲ್ಲವೋ ಅಲ್ಲಿ ಮಹಿಳೆ ನಾಲ್ಕು ಗೋಡಿಗಳ ಮಧ್ಯ ಬಂಧನದಲ್ಲಿದ್ದಾಳೆ ಹೆನ್ನೊಂದು ಕಲಿತರೆ ಶಾಲೆ ಎಂದು ತೆರನಂತೆ ಎಂಬ ನಾನುಡಿಯಂತೆ ಮಹಿಳೆ ಉನ್ನತ ಸ್ಥಾನದಲ್ಲಿ ಇರಬೇಕಾದರೆ ಅವರಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷ ರೇಣುಕಾ ಹಾದಿಮನಿ, ಭಗೀರಥ ಯುತಿ ಮಂಡಲದ ಅಧ್ಯಕ್ಷ ಕಸ್ತೂರಿ ಹೆಗ್ಗಾಣಿ, ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೂಡ್ಯಾಗೋಳ, ಮಂಜುನಾಥ ಕುಂಬಾರ, ಶಿಲ್ಪಾ ಗಡಾದ ಮುಂತಾದವರು ಉಪಸ್ಥಿತರಿದ್ದರು. ಶಶಿಧರ ಆರಾಧ್ಯ ನಿರೂಪಿಸಿ ವಂದಿಸಿದರು. ಅನ್ನಪೂರ್ಣ ಪೂಜಾರಿ ಪ್ರಾರ್ಥಿಸಿ ಸ್ವಾಗತಿಸಿದರು.


Spread the love

About Ad9 Haberleri

Check Also

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ …

Leave a Reply

Your email address will not be published. Required fields are marked *