Breaking News
Home / Uncategorized / ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಮಹದೇವ ಶೆಕ್ಕಿ

ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಮಹದೇವ ಶೆಕ್ಕಿ

Spread the love


ಮೂಡಲಗಿ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ದಿ.21ರಂದು ಬೆಳಗ್ಗೆ 10ಗಂಟೆಗೆ ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜಿಪಿ ಅರಭಾವಿ ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ ತಿಳಿಸಿದ್ದಾರೆ.
ಬುಧವಾರದಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ನಾಡನ್ನು ಬರಗಾಲ ಆವರಿಸಿದೆ. ಗಾಯದ ಮೇಲೆ ಬರೆ ಎಳೆದಂತೆ ರೈತ ಹೋರಾಟಗಾರರನ್ನು ಜೈಲಿಗೆ ತಳ್ಳಿ ರೈತರ ಧನಿಯನ್ನು ಅಡಗಿಸಲು ರೈತರೊಂದಿಗೆ ಅಮಾನವೀಯವಾಗಿ ನಡೆದುಕೊಂಡಿದೆ. ಈ ವರ್ಷ ಮುಂಗಾರು ಮಳೆ ಆಶಾದಾಯಕವಾಗಿ ಆಗುತ್ತಿದ್ದರೂ, ರೈತರು ಬಿತ್ತನೆ ಬೀಜ ಕೊಳ್ಳಲು ಕೈಯಲ್ಲಿ ಕಾಸಿಲ್ಲದ ಪರಿಸ್ಥಿತಿಯಾಗಿದೆ. ಸಾಲದ್ದಕ್ಕೆ ಬಿತ್ತನೆ ಬೀಜಗಳ ಬೆಲೆಯನ್ನು ಏರಿಸಿದೆ. ಗೊಬ್ಬರಗಳು ಸಿಗದೆ ರೈತರು ಅಲೆದಾಡುವಂತಾಗಿದೆ ಎಂದಿದ್ದಾರೆ.
ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ ಕೇವಲ ವಾಹನ ಸವಾರರಿಗೆ ಮಾತ್ರ ಹೊರೆಯಾಗುವುದಿಲ್ಲ, ಇದು ಸರಕು ಸಾಗಾಣಿಕೆಯ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದ ದರವನ್ನು ಹೆಚ್ಚಿಸಲಿದೆ, ತನ್ಮೂಲಕ ತರಕಾರಿಗಳ ಬೆಲೆ. ದಿನನಿತ್ಯ ಗೃಹಬಳಕೆ ವಸ್ತುಗಳ ಬೆಲೆ, ದವಸ ಧಾನ್ಯಗಳ ಬೆಲೆ, ಕಟ್ಟಡ ಸಾಮಗ್ರಿಗಳ ಬೆಲೆ ಹೆಚ್ಚಾಗಲಿದೆ. ಇದು ಇಡೀ ಕರುನಾಡ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಸರ್ವಾಧಿಕಾರಿ ನಿರ್ಧಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿದ್ದಾರೆ.
ಈ ಸರ್ಕಾರದ ಯೋಜನೆಗಳು ‘ಅತ್ತೆ ಮಾಡಿದ್ದನ್ನು ಆಳಿಯ ದಾನ ಮಾಡಿದಂತಿದೆ”. ದಾನ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ ಆದರೆ ಖಜಾನೆ ಬರಿದು ಮಾಡಿ, ಒಂದು ಕಡೆ ಕೊಟ್ಟು ಮತ್ತೊಂದು ಕಡೆಯಿಂದ ಕಸಿದುಕೊಳ್ಳುವ ಕಾಂಗ್ರೆಸ್ ಧೋರಣೆಯನ್ನು ಈ ರಾಜ್ಯದ ಜನತೆ ಈಗಾಗಲೇ ಅರ್ಥ ಮಾಡಿಕೊಂಡಿದ್ದಾರೆ. ಈ ಕಾರಣಕ್ಕಾಗಿಯೇ ನಿಮಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ನೀವು ಅಧಿಕಾರದಲ್ಲಿ ಉಳಿಯಲು ಯಾವ ನೈತಿಕತೆ ಇಲ್ಲ ಎನ್ನುವ ಉತ್ತರ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ, ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ನಾವು ಸರ್ಕಾರ ನಡೆಸುತ್ತೇವೆ ಎಂದು ಹೊರಟಿರುವ ಕಾಂಗ್ರೆಸ್ಸಿಗರು ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿದ್ದಾರೆ. ಇದನ್ನು ನೋಡಿಕೊಂಡು ಭಾರತೀಯ ಜನತಾ ಪಾರ್ಟಿ, ಕೈಕಟ್ಟಿ ಕೂರಲು ಸಾಧ್ಯವಿಲ್ಲ, ಕಾಂಗ್ರೆಸ್ ರೈತ ವಿರೋಧಿ, ಜನ ವಿರೋಧಿ, ಬಡವರ ವಿರೋಧಿ ಹಾಗೂ ಮಧ್ಯಮ ವರ್ಗಗಳ ವಿರೋಧಿ ಆಡಳಿತ ಕೊನೆಯಾಗುವ ವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸುತ್ತ ಇಂದು ನಡೆಯುವ ಪ್ರತಿಭಟನೆಯಲ್ಲಿ ಬಿಜೆಪಿ ಅರಭಾವಿ ಮಂಡಲದ ವಿವಿಧ ಮೋರ್ಚಾ ಪ್ರಮುಖರು, ಪದಾಧಿಕಾರಿಗಳು,ಸದಸ್ಯರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದ್ದಾರೆ.


Spread the love

About Ad9 Haberleri

Check Also

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

Spread the love *ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, …

Leave a Reply

Your email address will not be published. Required fields are marked *