ಮೂಡಲಗಿ: ಮೂಡಲಗಿ ಮತ್ತು ಗೋಕಾಕ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಗ್ರಾಮಗಳಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ NLOB ಪ್ರಕ್ರಿಯೆಯಡಿ BPL ಹಾಗೂ Restricted APL ಕೆಟಗೇರಿ ಫಲಾನುಭವಿಗಳಿಗೆ ಸರ್ಕಾರದ ಪ್ರೋತ್ಸಾಹಧನ ನೀಡಿ ಶೌಚಾಲಯ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ತಾಲ್ಲೂಕಿನ ಎಲ್ಲ ಜನಪ್ರತಿನಿಧಿಗಳು, ಸ್ವಯಂ ಸೇವಕರು, ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಲು ಮೂಡಲಗಿ ಮತ್ತು ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Ad9 News Latest News In Kannada