ಮೂಡಲಗಿ -ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾ ಅಧ್ಯಕ್ಷರನ್ನಾಗಿ ಪಂಚಮಸಾಲಿ ಮುಖಂಡರಾದ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ.ಕಿಶನಕುಮಾರ ಚೌಧರಿ ಆದೇಶ ಹೊರಡಿಸಿದ್ದಾರೆ.
ಪ್ರಕಟಣೆಯೊಂದರಲ್ಲಿ ಈ ವಿಷಯ ತಿಳಿಸಿರುವ ಅವರು, ತಕ್ಷಣವೇ ಪಾಟೀಲ ಅವರು ಮೂಡಲಗಿ ತಾಲೂಕಾ ಅಧ್ಯಕ್ಷ ಪದಗ್ರಹಣ ಮಾಡಿ, ರೈತರು, ಕೃಷಿ ಮಹಿಳೆಯರು ಹಾಗೂ ಕೃಷಿ ಕಾರ್ಮಿಕರನ್ನು ಸಂಘಟಿಸಿ ಅವರ ಬಲವರ್ಧನೆಗೆ ಕ್ರಮ ಕೈಗೊಳ್ಳಲು ಶ್ರಮಿಸಬೇಕು ಎಂದು ಹೇಳಿದ್ದಾರೆ.