ಮೂಡಲಗಿ: .ಪಟ್ಟಣದ ಬಸವೇಶ್ವರ ಸೊಸೈಟಿ ಆವರಣದಲ್ಲಿ ಸಂಸದೆ ಮಂಗಲಾ ಅಂಗಡಿ ಅವರ ಪುತ್ರಿ ಶೃದ್ಧಾ ಅಂಗಡಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಮಾಸ್ಕ್, ಸ್ಯಾನಿಟೈಜರ್ ವಿತರಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ ಆಶಾ ಕಾರ್ಯಕರ್ತೆಯರು ಕೋವಿಡ್ ಮೊದಲ ಹಾಗೂ ಎರಡನೆ ಅಲೆಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಕಷ್ಟು ಜನ ಜಾಗೃತಿ ಮೂಡಿಸುವ ಮೂಲಕ ಸಾಕಷ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರಿಗೆ ಕಿಟ್ಟ ವಿತರಿಸಿ ನಮ್ಮ ಅಳಿಲು ಸೇವೆ ಮಾಡುತ್ತಿದ್ದೇವೆ ಹಾಗೂ ಈ ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವ ಬಡ ಜನತೆಗೂ ಕೂಡ ನೆರವು ನೀಡಲಾಗುವುದು. ಎಲ್ಲರೂ ಸರಕಾರದ ಕೋವಿಡ್ ನಿಂತ್ರಣ ಮಾರ್ಗಸೂಚಿಯಂತೆ ಮಾಸ್ಕ್,ಸ್ಯಾನಿಟೈರ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವಂತೆ ವಿನಂತಿಸಿದರು.
ಬಿಜೆಪಿ ಮುಖಂಡ ಪ್ರಕಾಶ ಮಾದರ ಮಾತನಾಡಿದರು.
ಸೊಸೈಟಿ ಅಧ್ಯಕ್ಷ ಬಸವರಾಜ ತೇಲಿ, ಗಿರೀಶ ಢವಳೆಶ್ವರ, ಮಲ್ಲು ಢವಳೇಶ್ವರ, ಜಗದೀಶ ತೇಲಿ, ಅರಭಾಂವಿ ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ಕೇದಾರಿ ಭಸ್ಮೆ, ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಚೇತನ್ ನಿಶಾನಿಮಠ, ಸೊಸೈಟಿ ವ್ಯವಸ್ಥಾಪಕ ಬಸವರಾಜ ಬಡಿಗೇರ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಇದ್ದರು.
Check Also
ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.
Spread the love ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ …