ಮೂಡಲಗಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಯವರು ಕೊಡಮಾಡಿದ ಆಹಾರ ಕಿಟ್ ಗಳನ್ನು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಹಾಗೂ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಬಿಜೆಪಿ ಯುವ ಮುಖಂಡರಾದ ಶ್ರದ್ಧಾ ಅಂಗಡಿ ಶೆಟ್ಟರ್ ವಿತರಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್ ಮಾದರ್,ಅರಬಾವಿ ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೇದಾರಿ ಭಸ್ಮೆ,ಬಿಜೆಪಿ ಮುಖಂಡ ಕುಮಾರ್ ಗಿರಡ್ಡಿ, ಹಾಗೂ ಇನ್ನಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು..