Breaking News
Home / ಮೂಡಲಗಿ / ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

Spread the love

ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ ರೀತಿಯಾಗಿ ಗುರುವಾರದೊಂದು ಎರಡನೇ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆಯಲಿವೆ ಎಂದರು.

ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಸ್ವಲ್ಪ ತೊಂದರೆ ಉಂಟಾಗಿದ್ದರೂ ಕೂಡ ಎಲ್ಲ ಮಕ್ಕಳು ನಿಗದಿತ ಸಮಯಕ್ಕೆ ಹಾಜರಾಗಿ ಹುರುಪಿನಿಂದ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಎಂದರು.

ಚಿಕ್ಕೋಡಿ ಶೈಕ್ಷಣಿಕ ವ್ಯಾಪ್ತಿಯಲ್ಲಿ ಬರುವ 221 ಪರೀಕ್ಷಾ ಕೇಂದ್ರಗಳಲ್ಲಿ ಕಳೆದ ಪರೀಕ್ಷೆಯು ಹಾಗೂ ಇವತ್ತಿನ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಕೂಡ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿಯನ್ನು ಕರೆಯಲಾಗಿದ್ದು, ಸುದೈವಶಾತ್ ಯಾವುದೇ ಹಂತ ಪ್ರಕಾರಗಳು ಕಂಡುಬಂದಲ್ಲಿ ಎಂದು ತಿಳಿಸಿದರು.


Spread the love

About Ad9 Haberleri

Check Also

ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. …