Breaking News

ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿ ತೆರೆಯುವಂತೆ ಕೇಂದ್ರ ಸರ್ಕಾರ ಸೂಚನೆ

Spread the love

ನವದೆಹಲಿ: ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ವಾರದ ಎಲ್ಲ ದಿನವೂ ಪಡಿತರ ಅಂಗಡಿಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ವಾರದ ಎಲ್ಲಾ ದಿನಗಳಲ್ಲೂ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು ಮತ್ತು ಹೆಚ್ಚು ಅವಧಿ ಅಂಗಡಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ರಾಜ್ಯಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ ನೀಡಲಾಗಿದೆ.

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಕ್ರಮಕೈಗೊಂಡಿದೆ. ಬಡವರಿಗೆ ಉಚಿತವಾಗಿ ಆಹಾರಧಾನ್ಯಗಳು ಸಕಾಲದಲ್ಲಿ ಮತ್ತು ಸುರಕ್ಷಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನೇಕ ರಾಜ್ಯಗಳಲ್ಲಿ ಪಡಿತರ ಸರಿಯಾಗಿ ವಿತರಣೆಯಾಗದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.


Spread the love

About Ad9 News

Check Also

ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು

Spread the loveWhatsApp Tips and Tricks: ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್‌ಆಯಪ್​ನಲ್ಲಿ ಹರಿದಾಡುತ್ತಿರುತ್ತದೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, …